ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನದ ಭೀಕರ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಫ್ಲೈಟ್ AI 1717 – ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ, ಟೇಕ್‌ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡು ಭೀಕರ ದುರಂತ ಸಂಭವಿಸಿದೆ.
ಈ ದುರಂತದಿಂದಾಗಿ ವಿಮಾನದ ನಿರ್ವಹಣೆ, ತಾಂತ್ರಿಕ ದೋಷ ಮತ್ತು ಸೇಫ್ಟಿ ಪ್ರೋಟೋಕಾಲ್ ಕುರಿತಂತೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.
ಈ ದುರಂತದ ಬೆನ್ನಲ್ಲೇ ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಡೇವಿಡ್ ವಾರ್ನರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ನಿಜವಾಗಿದ್ದರೆ ಇದು ನಿಜಕ್ಕೂ ಅಘಾತಕಾರಿ ಎಂದು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಯೂಟ್ಯೂಬ್ ಕಮೆಂಟ್ ಸ್ಕ್ರೀನ್‌ಶಾಟ್ ಹಂಚಿಕೊಂಡು, “ಇನ್ನೆಂದೂ ನಾನು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ” ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಡೇವಿಡ್ ವಾರ್ನರ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಅವರ ಅಪಾರ ಅಭಿಮಾನಿಗಳ ಮಧ್ಯೆ ಚರ್ಚೆಗೆ ಗ್ರಾಸವಾಗಿದೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಈ ಕ್ರಿಕೆಟಿಗ, ಇತ್ತೀಚಿನ 2025ರ ಐಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್ ಆಗಿದ್ದರು.
— Akash Kharade (@cricaakash) June 14, 2025