ಅಹಮದಾಬಾದ್ ವಿಮಾನ ಅಪಘಾತ: ವ್ಯ ಒಟ್ಟು ಮೃತರ ಸಂಖ್ಯೆ 260, ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 260 ಆಗಿದೆ. ಕೊನೆಯ ವ್ಯಕ್ತಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜೂನ್ 12 ರಂದು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಹಾಸ್ಟೆಲ್ ಸಂಕೀರ್ಣಕ್ಕೆ ಅಪ್ಪಳಿಸಿತ್ತು. ಇದರಿಂದಾಗಿ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್ ನಲ್ಲಿದ್ದ ಕೆಲವರು ಮೃತಪಟ್ಟಿದ್ದರು. ಒಬ್ಬ ಪ್ರಯಾಣಿಕ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ.

ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೊನೆಯ ಮೃತದೇಹದ ಡಿಎನ್‌ಎ ಹೊಂದಾಣಿಕೆಯಾಗಿದ್ದು, ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ ರಾಕೇಶ್ ಜೋಶಿ ತಿಳಿಸಿದ್ದಾರೆ.

ಇದರೊಂದಿಗೆ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 260 ಆಗಿದೆ. ವಿಮಾನ ದುರಂತದಲ್ಲಿ ಗಾಯಗೊಂಡಿರುವ ಮೂವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇಲ್ಲಿಯವರೆಗೂ ಎಲ್ಲಾ 260 ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾವನ್ನಪ್ಪಿದ 241 ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ, 240 ಮಂದಿ ಮೃತದೇಹವನ್ನು ಈ ಹಿಂದೆಯೇ ಗುರುತಿಸಲಾಗಿತ್ತು. ಒಂದು ಮೃತದೇಹದ ಡಿಎನ್ ಎ ಹೊಂದಾಣಿಕೆಯಾಗಿರಲಿಲ್ಲ. ಶುಕ್ರವಾರ ಕೊನೆಯ ಮೃತದೇಹದ ಡಿಎನ್‌ಎ ಹೊಂದಾಣಿಕೆಯಾಗಿದೆ. ವಿಮಾನ ಅಪಘಾತವಾದಾಗ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಅಲ್ಲದೇ ಹಾಸ್ಟೇಲ್ ನಲ್ಲಿದ್ದ ಕೆಲವರು ಸೇರಿದಂತೆ 19 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!