ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆಗೆ ಎಐ ಕ್ಯಾಮೆರಾ ಕಣ್ಣು ಸಹಾಯ ಮಾಡಲಿದೆ, ಪ್ರಯಾಣಿಕರೇ ಇನ್ಮುಂದೆ ಜಾಗೃತವಾಗಿರಿ, ಇಲ್ಲಾ ಫೈನ್ ಗ್ಯಾರೆಂಟಿ!
ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಸುಮಾರು ಬೆಂಗಳೂರಿನ 3,000 ಕಡೆಗಳಲ್ಲಿ ಹೆಚ್ಚುವರಿಯಾಗಿ 750 ಕೃತಕ ಬುದ್ಧಿಮತ್ತೆ ಸ್ಮಾರ್ಟ್ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಟ್ರಾಫಿಕ್ ಪೊಲೀಸ್ ಮೂಲಗಳು ತಿಳಿಸಿವೆ.
ಈ ಸ್ಥಳಗಳಲ್ಲಿ ಈಗಾಗಲೇ ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೆಚ್ಚುವರಿ ಕ್ಯಾಮರಾಗಳನ್ನು ನಗರದ ಹೊರವಲಯ ಮತ್ತು ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿರುವ ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗುತ್ತದೆ.
ಟ್ರಾಫಿಕ್ ನಿರ್ವಹಣೆಗೆ ನೆರವಾಗುವುದು, ಹಿಟ್ ಅಂಡ್ ರನ್ ಪ್ರಕರಣಗಳು, ಮಹಿಳೆಯರಿಗೆ ಕಿರುಕುಳ ಮತ್ತು ಇತರ ಕಾನೂನು ಸುವ್ಯವಸ್ಥೆ ಸಂಬಂಧಿತ ಘಟನೆಗಳ ಮೇಲೆ ನಿರಂತರವಾಗಿ ಕಣ್ಗಾವಲಿರಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಸುರಕ್ಷಿತ ನಗರ ಯೋಜನೆಯ ಭಾಗವಾಗಿ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 150 ವಾಚ್ ಟವರ್‌ಗಳು ಮತ್ತು ಎಂಟು ಹೈ ಡೆಫಿನಿಷನ್ ಫೇಸ್-ರೆಕಗ್ನಿಷನ್ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎನ್ನಲಾಗಿದೆ.