Sunday, October 1, 2023

Latest Posts

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ AI ಕಣ್ಗಾವಲು: ನಿಯಮ ಉಲ್ಲಂಘಿಸಿದರೆ ದಂಡ ಪಕ್ಕಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ಸಂಚಾರ ಉಲ್ಲಂಘನೆ ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಹೊಸ ತಂತ್ರಜ್ಞಾನ ಬಳಕೆಗೆ ಮುಂದಾಗಿದ್ದು,ಅದ್ರಂತೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಕ್ಯಾಮೆರಾಗಳ ಪ್ರಾಯೋಗಿಕ ಚಾಲನೆ ಶುಕ್ರವಾರ ಆರಂಭವಾಗಿದೆ.

ಈ ಕ್ಯಾಮೆರಾಗಳು ವೇಗದ ಮಿತಿಯನ್ನು ಅಳೆಯುತ್ತವೆ ಮತ್ತು ಅತಿವೇಗ, ಸೀಟ್ ಬೆಲ್ಟ್ ಧರಿಸದಿರುವುದು, ಚಾಲನೆ ವೇಳೆ ಮೊಬೈಲ್ ಫೋನ್‌ಗಳನ್ನು ಬಳಸುವುದು ಮುಂತಾದ ಉಲ್ಲಂಘನೆಗಳನ್ನು ಸೆರೆಹಿಡಿಯುತ್ತದೆ.

ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ವೇಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಉಪಕ್ರಮವು ಅಪಘಾತಗಳ ಮತ್ತು ಸಾವುನೋವುಗಳ ಸಂಖ್ಯೆ ಕಡಿಮೆ ಮಾಡಲು ಸಹಾಯ ಮಾಡಲಿದೆ ಎಂದು ಭಾವಿಸುತ್ತೇವೆ. ಭಾರತೀಯ ರಸ್ತೆಗಳಲ್ಲಿ ಅತಿವೇಗವೇ ಆಪಘಾತ, ಸಾವುಗಳಿಗೆ ಪ್ರಮುಖ ಕಾರಣ ಎಂದು ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಎಕ್ಸ್‌ಪ್ರೆಸ್‌ವೇ ಲೇನ್‌ಗಳಲ್ಲಿ ವೇಗದ ಮಿತಿಯನ್ನು ಬಲ ಲೇನ್‌ಗೆ 100 ಕಿಮೀ, ಮಧ್ಯಕ್ಕೆ 80 ಕಿಮೀ ಮತ್ತು ಎಡ ಲೇನ್‌ಗೆ 60 ಕಿಮೀ ಮಿತಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!