October 1, 2026
Thursday, October 1, 2026
spot_img

ನರ್ಸಿಂಗ್ ಶಿಕ್ಷಣಕ್ಕೆ AI ಸ್ಪರ್ಶ: ಬಿಮ್ಸ್‌ನಲ್ಲಿ ರಾಷ್ಟ್ರೀಯ ಸಮ್ಮೇಳನ, ಆಧುನಿಕ ತಂತ್ರಜ್ಞಾನದ ಬಳಕೆ ಕುರಿತು ಚರ್ಚೆ

ಹೊಸದಿಗಂತ ವರದಿ ಬೆಳಗಾವಿ:

ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ವೇಗವಾಗಿ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ನರ್ಸಿಂಗ್ ಶಿಕ್ಷಣದ ನಡುವಿನ ಸಮನ್ವಯದ ಕುರಿತು ಗುರುವಾರ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ನಲ್ಲಿ ವಿಶೇಷ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಯಿತು.

ಸಮ್ಮೇಳನದಲ್ಲಿ ನರ್ಸಿಂಗ್ ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನಗಳ ಬಳಕೆ, ಕೃತಕ ಬುದ್ಧಿಮತ್ತೆಯ ಮೂಲಕ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ವಿಧಾನಗಳು, ರೋಗಿಗಳ ಆರೈಕೆಯಲ್ಲಿ AI ಆಧಾರಿತ ತಂತ್ರಜ್ಞಾನಗಳ ಬಳಕೆ ಹಾಗೂ ಭವಿಷ್ಯದ ಆರೋಗ್ಯ ಸೇವೆಗಳಲ್ಲಿ ನರ್ಸ್ಗಳ ಬದಲಾಗುತ್ತಿರುವ ಪಾತ್ರ ಕುರಿತು ತಜ್ಞರು ಚರ್ಚಿಸಿದ್ದಾರೆಂದು ಬಿಮ್ಸ್ ವೈಧ್ಯಕೀಯ ಸಂಸ್ಥೆಯ ಮುಖ್ಯೋಪಾಧ್ಯಾಯ ನಾಮದೇವ್ ಮಾಲಗಿ ಹೇಳಿದರು.

ಕೃತಕ ಬುದ್ಧಿಮತ್ತೆಯು ವೈದ್ಯಕೀಯ ಕ್ಷೇತ್ರದಲ್ಲಿ ರೋಗನಿರ್ಣಯ, ಮಾಹಿತಿ ವಿಶ್ಲೇಷಣೆ, ಆರೋಗ್ಯ ದಾಖಲೆಗಳ ನಿರ್ವಹಣೆ ಹಾಗೂ ವೈಯಕ್ತಿಕಗೊಳಿಸಿದ ಕಲಿಕೆಯಂತಹ ಹಲವು ಕ್ಷೇತ್ರಗಳಲ್ಲಿ ಸಹಾಯಕವಾಗುತ್ತಿದೆ. ನರ್ಸಿಂಗ್ ಶಿಕ್ಷಣದಲ್ಲಿಯೂ AI ಆಧಾರಿತ ಕಲಿಕಾ ಸಾಧನಗಳು ವಿದ್ಯಾರ್ಥಿಗಳಿಗೆ ವಿವಿಧ ಕ್ಲಿನಿಕಲ್ ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ನೆರವಾಗುವ ಸಾಧ್ಯತೆಯಿದೆ.

ಸಮ್ಮೇಳನದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ ಸೇರಿದಂತೆ ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳು ಭಾಗವಹಿಸಿ, ತಂತ್ರಜ್ಞಾನವನ್ನು ಮಾನವೀಯ ಮೌಲ್ಯಗಳೊಂದಿಗೆ ಸಮನ್ವಯಗೊಳಿಸುವ ಅಗತ್ಯದ ಕುರಿತು ಅಭಿಪ್ರಾಯ ಹಂಚಿಕೊಂಡರು. ರೋಗಿಗಳ ಸುರಕ್ಷತೆ, ಮಾಹಿತಿಯ ಗೌಪ್ಯತೆ, AI ಬಳಕೆಯ ನೈತಿಕತೆ ಹಾಗೂ ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವ ಕುರಿತು ಕೂಡ ಚರ್ಚೆ ನಡೆಯಿತು.

ಇದನ್ನೂ ಓದಿ:

ಆಧುನಿಕ ಆರೋಗ್ಯ ವ್ಯವಸ್ಥೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಜೊತೆಗೆ ನರ್ಸ್ಗಳ ಮಾನವೀಯ ಸ್ಪರ್ಶ, ಸಂವಹನ ಕೌಶಲ್ಯ ಮತ್ತು ರೋಗಿಗಳತ್ತದ ಕಾಳಜಿಯನ್ನು ಉಳಿಸಿಕೊಳ್ಳುವುದು ಅಗತ್ಯ ಎಂಬ ಅಭಿಪ್ರಾಯ ಸಮ್ಮೇಳನದಲ್ಲಿ ವ್ಯಕ್ತವಾಯಿತು.

ಬಿಮ್ಸ್ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಆಧುನಿಕ ತಂತ್ರಜ್ಞಾನಗಳ ಬಳಕೆಯ ಕುರಿತು ಚಟುವಟಿಕೆಗಳು ನಡೆಯುತ್ತಿರುವುದಕ್ಕೆ ಲಭ್ಯವಿರುವ ಮಾಹಿತಿಯೂ ಸಾಕ್ಷಿಯಾಗಿದೆ. ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ಕಲಿಕಾ ವಿಧಾನಗಳು ವೈದ್ಯಕೀಯ ಶಿಕ್ಷಣದ ಭವಿಷ್ಯದಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂಬುದು ಸಮ್ಮೇಳನದ ಚರ್ಚೆಗಳ ಪ್ರಮುಖ ಆಶಯವಾಗಿತ್ತು.
ಈ ವೇಳೆ ಬಿಮ್ಸ್ ವೈದ್ಯಕೀಯ ಸಂಸ್ಥೆಯ ಶಿಕ್ಷಕರು, ಸಿಬ್ಬಂದಿಗಳು ಕಾಲೇಜು ವಿಧ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

Must Read