Friday, November 21, 2025

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ನಾಳೆ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಖರ್ಗೆ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಆರಾಮವಾಗಿ ಇದ್ದಾರೆ. ಈಗ ಸರಿ ಹೋಗಿದ್ದಾರೆ. ಚೆನ್ನಾಗಿ ಮಾತನಾಡಿದರು. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಹೇಳಿದ್ದಾರೆ.

error: Content is protected !!