Friday, October 31, 2025

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಗನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಮಿಲಿಂದ ಖರ್ಗೆಯವರು ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮೂವರು ಗಂಡು ಮಕ್ಕಳಿದ್ದಾರೆ.

ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ.

error: Content is protected !!