Sunday, December 4, 2022

Latest Posts

ನಾಳೆ ರಾಜ್ಯಕ್ಕೆ ಎಐಸಿಸಿ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ ಆಗಮನ: ‘ಕೈ’ ನಾಯಕರು ಸಜ್ಜು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನ. 6 ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.

ಖರ್ಗೆ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕೈ ನಾಯಕರು ಭರ್ಜರಿ ಸಿದ್ದತೆ ನಡೆಸಿದ್ದು, ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಸಲಾಗುತ್ತಿದೆ. ನಾಳೆ ಮಧ್ಯಾಹ್ನ 2.30 ಕ್ಕೆ ಸಮಾವೇಶ ಆರಂಭವಾಗಲಿದೆ. ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ಕಾರ್ಯಕ್ರಮದಲ್ಲಿ 50 ಸಾವಿರ ಜನರು ಸೇರಲಿದ್ದು, ರಣದೀಪ್ ಸಿಂಗ್ ಸುರ್ಜೆವಾಲಾ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಹಾಜರಿರಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!