ನಾಳೆ ಮೈಸೂರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆ ಮೈಸೂರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ ಗಾಂಧಿ ಹೆಲಿಕಾಪ್ಟರ್ ನಲ್ಲಿ ಮಡಿಕೇರಿಗೆ ಪ್ರಯಾಣ ಬೆಳೆಸಲಿದ್ದಾರೆ.ಕೂರ್ಗ್ ವೈಲ್ಡ್ ನೆಸ್ಟ್ ರೆಸಾರ್ಟ್ ನಲ್ಲಿ ತಂಗಲಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ಗೆ ಆಯುಧಪೂಜೆ ಮತ್ತು ವಿಜಯದಶಮಿ ಅಂಗವಾಗಿ ಎರಡು ದಿನ ಬಿಡುವು ನೀಡಲಾಗಿದೆ.
ಎರಡು ದಿನ ರೆಸಾರ್ಟ್ ನಲ್ಲಿ ಸೋನಿಯಾ ಗಾಂಧಿ ತಂಗಲಿದ್ದು, ರಾಹುಲ್ ಗಾಂಧಿ ಹಾಗೂ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಕೂಡ ವಾಸ್ತವ್ಯ ಹೂಡಲಿದ್ದಾರೆ.
ಅಕ್ಟೋಬರ್ 6 ರಂದು ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ. ಸಾಂಕೇತಿಕವಾಗಿ ಕೆಲಕಾಲ ಹೆಜ್ಜೆ ಹಾಕಿ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!