ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಅವರು ಶನಿವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
1955ರ ಸೆಕ್ಷನ್ 6ಬಿ ಅಡಿಯಲ್ಲಿ (ಪೌರತ್ವ (ತಿದ್ದುಪಡಿ) ಕಾಯ್ದೆ, 2019ರಿಂದ ತಿದ್ದುಪಡಿ ಮಾಡಲ್ಪಟ್ಟಂತೆ) ಅಡಿಯಲ್ಲಿ ಪೌರತ್ವ ಸ್ಥಾನಮಾನವನ್ನು ನೀಡುವಂತೆ ಕೋರುವ ಯಾವುದೇ ಅರ್ಜಿಗಳನ್ನು ಸರ್ಕಾರ ಪರಿಗಣಿಸಬಾರದು, ಮುಂದಿನ ಪ್ರಕ್ರಿಯೆ ನಡೆಸಬಾರದು ಎಂದು ಅವರು ಆಗ್ರಹಿಸಿದ್ದಾರೆ. ಸಿಎಎಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿಯೊಂದಿಗೆ ನೋಡಬೇಕು ಎಂದು ಓವೈಸಿ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ನಲ್ಲಿ ಅಂಕಿತ ಹಾಕಿದ್ದರು. ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ