August 10, 2026
Monday, August 10, 2026
spot_img

ಚಿನ್ನದ ಗುರಿ: ಹರ್ಮನ್‌ಪ್ರೀತ್ ನೇತೃತ್ವದಲ್ಲಿ ಏಷ್ಯನ್ ಗೇಮ್ಸ್‌ಗೆ ಸಜ್ಜಾದ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಕನಸಿನೊಂದಿಗೆ ಭಾರತ ಪುರುಷರ ಹಾಕಿ ತಂಡ ಕಣಕ್ಕಿಳಿಯಲು ಸಜ್ಜಾಗಿದೆ. ಜಪಾನ್‌ನಲ್ಲಿ ನಡೆಯಲಿರುವ 20ನೇ ಏಷ್ಯನ್ ಕ್ರೀಡಾಕೂಟಕ್ಕಾಗಿ 20 ಸದಸ್ಯರ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದ್ದು, ಹರ್ಮನ್‌ಪ್ರೀತ್ ಸಿಂಗ್‌ಗೆ ಮತ್ತೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಗುರಿ

ಸೆಪ್ಟೆಂಬರ್ 19ರಿಂದ ಅಕ್ಟೋಬರ್ 4ರವರೆಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯಲಿದೆ. ಇದೇ ವೇಳೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯುವ ಗುರಿಯನ್ನೂ ತಂಡ ಹೊಂದಿದೆ.

ಇದನ್ನೂ ಓದಿ:

ಲೀಗ್ ಹಂತದಲ್ಲಿ ಬಲಿಷ್ಠ ಎದುರಾಳಿಗಳು

ಭಾರತ ತಂಡ ಪೂಲ್ ‘ಎ’ನಲ್ಲಿ ಜಪಾನ್, ದಕ್ಷಿಣ ಕೊರಿಯಾ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಇಂಡೋನೇಷ್ಯಾ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಸೆಪ್ಟೆಂಬರ್ 20ರಂದು ಇಂಡೋನೇಷ್ಯಾ ವಿರುದ್ಧ ಮೊದಲ ಪಂದ್ಯವಾಡಲಿದ್ದು, ಬಳಿಕ ಉಳಿದ ಲೀಗ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ.

ಅನುಭವಿ-ಯುವ ಆಟಗಾರರ ಸಮತೋಲನ

ತಂಡದಲ್ಲಿ ಹರ್ಮನ್‌ಪ್ರೀತ್ ಸಿಂಗ್, ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಹಾರ್ದಿಕ್ ಸಿಂಗ್ ಹಾಗೂ ವಿವೇಕ್ ಸಾಗರ್ ಪ್ರಸಾದ್ ಸೇರಿದಂತೆ ಅನುಭವಿ ಆಟಗಾರರ ಜೊತೆಗೆ ಯುವ ಪ್ರತಿಭೆಗಳಿಗೂ ಅವಕಾಶ ನೀಡಲಾಗಿದೆ. ಒತ್ತಡವಿಲ್ಲದೆ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ನಾಯಕ ಹರ್ಮನ್‌ಪ್ರೀತ್ ಸಿಂಗ್ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !