ಉಕ್ರೇನ್‌ ರಾಜಧಾನಿ ಕೀವ್‌ ನಲ್ಲಿ ಹೈ ಅಲರ್ಟ್:‌ ಕ್ಷಿಪಣಿ ದಾಳಿ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ಕ್ಷಿಪಣಿ ದಾಳಿ ನಡೆಯುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ನಗರದ್ಯಾಂತ ಹೈ ಅಲರ್ಟ್‌ ಘೋಷಿಸಲಾಗಿದೆ.
ವಾಯು ಸೇನೆಯಿಂದ ದಾಳಿ ನಡೆಯುವ ಸಾಧ್ಯತೆ ಇದ್ದು, ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಉಕ್ರೇನ್‌ ಪ್ರಾದೇಶಿಕ ಆಡಳಿತ ಮುಖ್ಯಸ್ಥ ಒಲೆಕ್ಸಿ ಕುಲೆಬಾ, ಕೀವ್‌ ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕ್ಷಿಪಣಿ ದಾಳಿ ನಡೆಯುವ ಸಾಧ್ಯತೆ ಇದೆ. ಹಾಗಾಗಿ ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು.
ಕಳೆದ ಎರಡು ವಾರಗಳಿಂದ ಉಕ್ರೇನ್‌ ಮೇಲೆ ನಡೆಯುತ್ತಿರುವ ದಾಳಿಗೆ ರಷ್ಯಾ ಈಗ ಕದನವಿರಾಮ ಘೋಷಿಸಿದೆ. ಆದರೆ ಈಗಾಗಲೇ ರಷ್ಯಾ ಉಕ್ರೇನ್‌ ಕೆಲವು ನಗರಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಇದೀಗ ರಾಜಧಾನಿ ಕೀವ್‌ ಅನ್ನು ತನ್ನ ತೆಕ್ಕೆಗೆ ಪಡೆದುಕೊಳ್ಳಲು ರಷ್ಯಾ ಪಡೆಗಳು ಮುಂದಾಗಿವೆ. ಆದರೆ ಇದಕ್ಕೆ ಉಕೇನ್‌ ಪಡೆ ಸೂಕ್ತ ಪ್ರತ್ಯುತ್ತರ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!