ಹೊಸದಿಗಂತ ರಾಯಚೂರು :
ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಚಿನ್ನದಗಣಿಯಲ್ಲಿ ಏರ್ ಬ್ಲಾಸ್ಟ್ ನಿಂದ ಓರ್ವ ಕಾರ್ಮಿಕ ಸಾವು, ಇನ್ನೋರ್ವ ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.
ಮೃತ ಕಾರ್ಮಿಕನ್ನು ಶರಣಬಸವ(40) ಎಂದು ಗುರುತಿಸಲಾಗಿದೆ. ನಿರುಪಾದಿ ಎನ್ನು ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು ಕಾರ್ಮಿಕನನ್ನು ಚಿಕಿತ್ಸೆಗಾಗಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಮಿಕರು ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ ನಲ್ಲಿ 2800 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇನ್ನೂ ಕಾರ್ಮಿಕರು ಒಳಗೆ ಸಿಲುಕಿರುವ ಶಂಕೆ. ಚಿನ್ನದ ಗಣಿಯ ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
೦-೦-೦-೦