ರಾಯಚೂರಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ನಿಂದ ದುರಂತ ಸಂಭವಿಸಿದೆ.

ಆರು ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಿಂದ ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿ ಗಾಯಗೊಂಡಿದ್ದಾರೆ. ಬಸವರಾಜ್ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ನಿನ್ನೆ ಮಧ್ಯಾಹ್ನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸುರಂಗ ಮಾರ್ಗದ ಕಾರ್ಯಾಚರಣೆಯ ಸಮಯದಲ್ಲಿ ಹಠಾತ್ ಏರ್ ಬ್ಲಾಸ್ಟ್ ಸಂಭವಿಸಿದೆ. ನೆಲ ಕುಸಿದು ಉಸಿರಾಟದ ಸಮಸ್ಯೆ ಉಂಟಾಗಿದೆ. ತಕ್ಷಣ ಆರು ಮಂದಿ ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!