ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಇಂದೂ ಕೂಡಾ ಯಥಾಸ್ಥಿತಿ!

ಹೊಸದಿಗಂತ ವರದಿ ಮಂಗಳೂರು: 

ಏ.17ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕೊಡಗು, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆ, ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆಯಿದೆ.

ಇನ್ನು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಿಗೆ ಕೂಡಾ ವರುಣಾಗಮನದ ಸಾಧ್ಯತೆಯಿದ್ದು, ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!