ಐಸಿಯುನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಪತ್ರೆಯ ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗಲೇ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಖುದ್ದು ಮಹಿಳೆ

ಈ ಸಂಬಂಧ ಏಪ್ರಿಲ್‌ 13ರಂದು ಗಗನಸಖಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಆಕೆ ದೂರು ನೀಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆ ದೂರಿನಲ್ಲಿ ಏನಿತ್ತು?

ಕಂಪನಿಯ ಪರವಾಗಿ ತರಬೇತಿಗಾಗಿ ಗುರುಗ್ರಾಮ್‌ಗೆ ಬಂದಿದ್ದ ಮಹಿಳೆ, ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಳು. ಈ ಸಂದರ್ಭದಲ್ಲಿ ಆಕೆಯ ಆರೋಗ್ಯ ತೀರಾ ಹದಗೆಟ್ಟಿತ್ತು. ಬಳಿಕ ಆಕೆಯ ಪತಿ ಆಕೆಯನ್ನ ಹೆಚ್ಚುವರಿ ಚಿಕಿತ್ಸೆಗಾಗಿ ಗುರುಗ್ರಾಮ್‌ನ ಆಸ್ಪತ್ರೆಗೆ ದಾಖಲಿಸಿದ್ದರು. ಏಪ್ರಿಲ್ 13 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ತಾನು ಪ್ರಜ್ಞಾಹೀನಳಾಗಿ, ವೆಂಟಿಲೇಟರ್​ ಸಪೋರ್ಟ್​ನಲ್ಲಿರುವಾಗ ಆಸ್ಪತ್ರೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದು, ದೈಹಿಕ ಸಂಪರ್ಕ ಬೆಳೆಸಲು ಮುಂದಾಗಿದ್ದ, ಆಗ ನನಗೆ ಎಚ್ಚರವಾದರೂ ಕೂಗಿಕೊಳ್ಳಲು ಅಥವಾ ಓಡಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!