ಹೊಸದಿಗಂತ ಆನ್ ಲೈನ್ ಡೆಸ್ಕ್:
ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಕಾರ್ಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಕೇರಳದ ಕೋಝಿಕೋಡ್(ಕ್ಯಾಲಿಕಟ್) ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ.
ಇಂದು ಬೆಳಗ್ಗೆ ಕ್ಯಾಲಿಕಟ್ ನಿಂದ ಕುವೈತ್ ಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪೈಲೆಟ್ ಮುನ್ನೆಚ್ಚರಿಕಾ ಕ್ರಮದಂತೆ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ.
ವಿಮಾನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ವಕ್ತಾರ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.