ಸಂತ್ರಸ್ತ ಕುಟುಂಬಕ್ಕೆ ತಕ್ಷಣವೇ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬಕ್ಕೆ ಏರ್ ಇಂಡಿಯಾ ಹೆಚ್ಚುವರಿ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಕ್ಷಣವೇ ಮಧ್ಯಂತರ ಪರಿಹಾರವಾಗಿ 25 ಲಕ್ಷ ನೀಡುವ ವ್ಯವಸ್ಥೆ ಮಾಡಿದೆ.

ಏರ್‌ಪೋರ್ಟ್ ಬಳಿ ದುರಂತವಾಗುತ್ತಿದ್ದಂತೆ ಮೊದಲ ದಿನವೇ ಏರ್ ಇಂಡಿಯಾ 1 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಘಟನೆ ನಡೆದ 3ನೇ ದಿನಕ್ಕೆ 1 ಕೋಟಿ ರೂಪಾಯಿ ಪರಿಹಾರಕ್ಕೆ ಹೆಚ್ಚುವರಿಯಾಗಿ 25 ಲಕ್ಷ ಪರಿಹಾರ ಇದೀಗ ಘೋಷಣೆ ಮಾಡಿದೆ.

ಅಂದು ಏರ್‌ ಇಂಡಿಯಾ ವಿಮಾನದಲ್ಲಿ 242 ಮಂದಿ ಪ್ರಯಾಣಿಸಿದ್ದರು. ಪವಾಡ ಸದೃಶ್ಯ ರೀತಿಯಲ್ಲಿ ಒಬ್ಬರು ಬಿಟ್ಟರೆ 241 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!