ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ: ಬೆಂಗಳೂರನ್ನು ವಾಯುಯಾನ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಸಂಸ್ಥೆಗಳ ಮಧ್ಯೆ ಮಹತ್ವದ ಒಪ್ಪಂದವಾಗಿದ್ದು, .ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಏರ್ ಇಂಡಿಯಾ (ಇತರ ಟಾಟಾ ಗ್ರೂಪ್ ಏರ್‌ಲೈನ್ಸ್ ಕಂಪನಿಗಳಾದ AIX ಮತ್ತು ವಿಸ್ತಾರಾವನ್ನೂ ಒಳಗೊಂಡು) ಮತ್ತು BIAL ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ.

ಇದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್‌ವರ್ಕ್ (enhanced network) ಮೂಲಕ ಟಾಟಾ ಗ್ರೂಪ್ ಏರ್‌ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾದ ಪ್ರೀಮಿಯಂ ಪ್ರಯಾಣಿಕರು ಮತ್ತು ನಿಯಮಿತ ಪ್ರಯಾಣಿಕರಿಗೆ ಮೀಸಲಾದ ವಿಶ್ರಾಂತಿ ಕೋಣೆ (lounge) ನಿರ್ಮಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.

ಈ ಒಪ್ಪಂದದ ಭಾಗವಾಗಿ, BLR ವಿಮಾನ ನಿಲ್ದಾಣದಲ್ಲಿ ಎಂಆರ್​ಒ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿಹೇಳುತ್ತದೆ.

ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘ-ಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ. ಈ ಪಾಲುದಾರಿಕೆಯು MRO ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ.

ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್, ಬೆಂಗಳೂರು ವಾಯು ಸಂಪರ್ಕ ಕೇಂದ್ರದ ಹಬ್‌ ಆಗಿದ್ದು, ವಿಮಾನಯಾನ ಹಾಗೂ ವಿಮಾನ ನಿಲ್ದಾಣದಲ್ಲಿನ ದಕ್ಷ ಕಾರ್ಯಾಚರಣೆಯಿಂದ ಗ್ರಾಹಕರು ಉತ್ತಮ ಅನುಭವ ಪಡೆಯುತ್ತಿದ್ದಾರೆ, ವಿಮಾನ ನಿಲ್ದಾಣದ ಅನುಭೂತಿಯನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ವಾಯು ಸಂಪರ್ಕವನ್ನು ವಿಸ್ತರಿಸಲು ಮುಂದಾಗಿದ್ದೇವೆ. ಇದಕ್ಕಾಗಿ. ಪ್ರಮುಖ MRO ಕೇಂದ್ರವನ್ನು ನಿರ್ಮಿಸುವ ದೃಷ್ಟಿಯಿಂದ BIAL ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಪಾಲುದಾರಿಕೆಯು ಏರ್ ಇಂಡಿಯಾ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!