BIG NEWS | ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ಬೆಂಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬುಧಾಬಿಯಿಂದ ಹೊರಟ ಏರ್ ಇಂಡಿಯಾ ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ವಿಮಾನ, ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಅಬುಧಾಬಿಯಿಂದ ಕ್ಯಾಲಿಕಟ್‌ಗೆ ಹೊರಟಿದ್ದ ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿದೆ. ಗಾಬರಿಯಾದ ಜನರು ಕೂಗಾಡಿದ್ದಾರೆ. ತಕ್ಷಣ ವಿಮಾನ, ನಿಲ್ದಾಣಕ್ಕೆ ವಾಪಾಸಾಗಿದೆ. ಸಮುದ್ರ ಮಟ್ಟದಿಂದ ಸುಮಾರು ಸಾವಿರ ಅಡಿ ಎತ್ತರದಲ್ಲಿ ಬೆಂಕಿ ಕಾಣಿಸಿದೆ.

184 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದಲ್ಲಿ ಟೆಕ್ನಿಕಲ್ ಸಮಸ್ಯೆಯಿಂದ ಬೆಂಕಿ ಹತ್ತಿರುವುದು ತಿಳಿದುಬಂದಿದೆ. ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ನಿಲ್ದಾಣದಲ್ಲಿ ಇಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!