Saturday, April 1, 2023

Latest Posts

ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ : ಮಾರ್ಗ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇರಳದ ಕೋಝಿಕ್ಕೋಡ್‌ನಿಂದ ಸೌದಿ ಅರೇಬಿಯಾದ ದಮನ್‌ಗೆ 168 ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಶುಕ್ರವಾರ ತಿರುವನಂತಪುರಕ್ಕೆ ಮಾರ್ಗ ಬದಲಿಸಲಾಗಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವನ್ನು ತಾಂತ್ರಿಕ ಸಮಸ್ಯೆಗಳಿಂದ ಮಾರ್ಗ ಬದಲಿಸಲಾಗಿದೆ ಎಂದು ಏರ್‌ಲೈನ್‌ನ ವಕ್ತಾರರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 19 ರಂದು ದುಬೈನಿಂದ ತಿರುವನಂತಪುರಕ್ಕೆ (Flt no IX540) ಹೊರಟ್ಟಿದ್ದ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷವನ್ನು ಗಮನಿಸಿದ ನಂತರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ವಿಮಾನದಲ್ಲಿದ್ದ ಎಲ್ಲಾ 156 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಂತರ ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!