ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್ನಲ್ಲಿ ಹಾವೊಂದು ಪತ್ತೆಯಾಗಿದ್ದು, ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಮಾನದ ಕಾರ್ಗೋ ಹೋಲ್ಡ್ನಲ್ಲಿ ಹಾವು ಕಂಡುಬಂದಿದ್ದು, ವಿಮಾನ ನಿಲ್ದಾಣದ ಅಗ್ನಿಶಾಮಕ ಸೇವೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ವಿಮಾನ ನಿರ್ವಹಣೆಯಲ್ಲಿ ಲೋಪವಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಸೂಕ್ತ ಜಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.