ಏರ್‌ಇಂಡಿಯಾ ವಿಮಾನ ದುರಂತ | 215 ಡಿಎನ್‌ಎ ಮ್ಯಾಚ್‌: 198 ಮೃತದೇಹ ಹಸ್ತಾಂತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏರ್‌ ಇಂಡಿಯಾವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ ಒಟ್ಟು 215 ಮಂದಿ ಗುರುತು ಪತ್ತೆಯಾಗಿದ್ದು, 198 ಮೃತ ದೇಹಗಳನ್ನ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್‌ ಆಗಿವೆ. ಈ ಪೈಕಿ 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತಿ ಕೆನಡಿಯನ್‌ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ ಎನ್ನುವ ಮಾಹಿತಿ ಲಭ್ತ

15 ಮೃತದೇಹಗಳನ್ನು ಏರ್‌ ಅಂಬುಲೆನ್ಸ್‌ ಹಾಗೂ 183 ಮೃತದೇಹಗಳನ್ನು ರೋಡ್‌ ಅಂಬುಲೆನ್ಸ್‌ ಮೂಲಕ ಸಾಗಿಸಲಾಗಿದೆ. ಇದೆಲ್ಲವೂ ಸೇರಿ ಒಟ್ಟಾರೆ 222 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. 8 ಮಂದಿ ಮೃತದೇಹಗಳ ಗುರುತು ಮಾತ್ರ ಪತ್ತೆಯಾಗಿಲ್ಲ ಎಂದು ವಿವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!