ಏರ್‌ ಇಂಡಿಯಾ ವಿಮಾನ ಪತನ: ಬೆಂಗಳೂರು-ಅಹಮದಾಬಾದ್‌ ಇಂಡಿಗೋ ವಿಮಾನ ಹಾರಾಟ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ AI171 ಅಪಘಾತದ ನಂತರ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಬೆಂಗಳೂರಿನಿಂದ-ಅಹಮದಾಬಾದ್’ಗೆ ತೆರಳಬೇಕಿದ್ದ ವಿಮಾನಗಳ ಹಾರಾಟವನ್ನೂ ರದ್ದುಗೊಳಿಸಲಾಗಿದೆ.

ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗುವ ಇತರ ವಿಮಾನಗಳ ಹಾರಾಟದ ಮೇಲೆ ಯಾವುದೇ ಪರಿಣಾಮವಿಲ್ಲ ಎಂದು ದೃಢಪಡಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಜೂನ್‌12ರಂದು ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಮಾಡಿದ ಕೆಲವೇ ಕ್ಷಣಗಳಲ್ಲಿ ಈ ದುರಂತ ಸಂಭವಿಸಿದೆ. ಜನನಿಬಿಡ ಪ್ರದೇಶವಾದ ಮೇಘಾನಿ ನಗರದ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ 241 ಮಂದಿ ದುರ್ಮರಣವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here