ಹಕ್ಕಿ ಡಿಕ್ಕಿ ಹೊಡೆದು ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಟೇಕಾಫ್ ಆದ ಸ್ವಲ್ಪವೇ ಸಮಯದಲ್ಲಿ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರು ಇದ್ದು, ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಕ್ಕಿ ಡಿಕ್ಕಿ ಹೊಡೆದ ಕಾರಣ ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಗಿದೆ.
ವಿದೇಶಗಳಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ವಿಮಾನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು. ಇನ್ನು ದೆಹಲಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಹೊಟೇಲ್‌ಗಳಲ್ಲಿ ಇರಿಸಲಾಗಿದ್ದು, ಇಂದು ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!