ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾದಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ವಿಮಾನ AI1132 ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ರಾತ್ರಿ 11:20 ಕ್ಕೆ ಹೊರಟಿತು. ಆದರೆ ಇದ್ದಕ್ಕಿದ್ದಂತೆ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಪೈಲಟ್ ಕೂಡಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರು.
ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.