ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾದ ಬೋಯಿಂಗ್ 787-9 ವಿಮಾನ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸ್ಥಗಿತಗೊಳಿಸಿದ ಘಟನೆ ಗುರುವಾರ ನಡೆದಿದೆ.
ಇಂದು ದೆಹಲಿಯಿಂದ ಲಂಡನ್‌ಗೆ ಹಾರಾಟ ಆರಂಭಿಸಿದ AI2017 ವಿಮಾನದಲ್ಲಿ ಕೂಡಲೇ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ತದನಂತರ ಅದು ಬೇ (bay) ಗೆ ಮರಳಿದೆ.
ಕಾಕ್‌ಪಿಟ್ ಸಿಬ್ಬಂದಿ ಮಾರ್ಗಸೂಚಿಗಳನ್ನು (Sop) ಅನುಸರಿಸಿ ಟೇಕಾಫ್ ಸ್ಥಗಿತಕ್ಕೆ ನಿರ್ಧರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗಾಗಿ ಲ್ಯಾಂಡಿಂಗ್ ಮಾಡಿದರು ಎಂದು ಏರ್‌ಲೈನ್ ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಮಾನದ ಬದಲಿಗೆ ಪರ್ಯಾಯ ವಿಮಾನವನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬದಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಏರ್ ಲೈನ್ಸ್ ವಿಷಾದ ವ್ಯಕ್ತಪಡಿಸಿದೆ.