ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ ನಡೆದಿದೆ.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
#WATCH | Air India plane crash site in Gujarat’s Ahmedabad
Air India B787 Aircraft VT-ANB, while operating flight AI-171 from (Ahmedabad to Gatwick) has crashed immediately after takeoff from Ahmedabad. There were 242 people on board the aircraft, consisting of 2 pilots and 10… pic.twitter.com/QCF4fzFtpi
— ANI (@ANI) June 12, 2025
ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.
Air India Ahemdabad-London international flight has crashed during take off in Ahemdabad of Gujarat. 133 passengers reportedly were on board. High casualties expected. Emergency response teams are on site now. Rescue work is underway. pic.twitter.com/SxekWpvqTG
— Aditya Raj Kaul (@AdityaRajKaul) June 12, 2025