ದುಬೈನಿಂದ ಪಂಜಾಬ್‌ ಹೊರಟ ಏರ್ ಇಂಡಿಯಾ ಕರಾಚಿಯಲ್ಲಿ ತುರ್ತು ಭೂಸ್ಪರ್ಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದುಬೈನಿಂದ ಪಂಜಾಬ್‌ನ ಅಮೃತಸರಕ್ಕೆಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ದುಬೈನಿಂದ ಅಮೃತಸರದತ್ತ ಸಾಗುತ್ತಿದ್ದ ವಿಮಾನ ಭಾರತ ಗಡಿ ಪ್ರವೇಶ ಮಾಡಿರಲಿಲ್ಲ. ಆದ್ರೆ ಪ್ರಯಾಣಿಕನಿಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇತ್ತು. ಹೀಗಾಗಿ ಭಾರತದ ಮನವಿಗೆ ಸ್ಪಂದಿಸಿದ ಪಾಕಿಸ್ತಾನ ಕರಾಚಿಯಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಮಾಡಲು ಅವಕಾಶ ನೀಡಿದೆ. ಇದೇ ವೇಳೆ ಕರಾಚಿ ವಿಮಾನ ನಿಲ್ದಾಣದ ವೈದ್ಯರ ತಂಡ ಪ್ರಯಾಣಿಕನಿಗೆ ತುರ್ತು ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದೆ.

ಇಂದು ದುಬೈನಿಂದ ಹೊರಟ ವಿಮಾನ ನೇರವಾಗಿ ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಪ್ರಯಾಣಿಕನ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ವಿಮಾನದ ಸಿಬ್ಬಂದಿಗಳು ಭಾರತದ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಕಾರಣ ಏರ್ ಇಂಡಿಯಾ ವಿಮಾನ ಇನ್ನೂ ಭಾರತ ಗಡಿ ಪ್ರವೇಶಿಸಿರಲಿಲ್ಲ. ಹತ್ತಿರದ ವಿಮಾನ ನಿಲ್ದಾಣ ಕರಾಚಿ ಬಿಟ್ಟು ಬೇರೆ ಇರಲಿಲ್ಲ. ಹೀಗಾಗಿ ಅಧಿಕಾರಿಗಳು ಕರಾಚಿ ವಿಮಾನ ನಿಲ್ದಾಣ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.

ಭಾರತ ಮನವಿಗೆ ಸ್ಪಂದಿಸಿದ ಕರಾಚಿ ವಿಮಾನ ನಿಲ್ದಾಣ ಅಧಿಕಾರಿಗಳು, ತಕ್ಷಣವೇ ಏರ್ ಇಂಡಿಯಾ ವಿಮಾನ ನಿಲ್ದಾಣ ತುರ್ತು ಭೂಸ್ಪರ್ಶಕ್ಕೆ ಅವಕಾಶ ನೀಡಲಾಯಿತು. ಮಧ್ಯಾಹ್ನ 12.30ಕ್ಕೆ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ವೈದ್ಯರ ತಂಡ ಪ್ರಯಾಣಿಕನಿಗೆ ನೆರವು ನೀಡಿದೆ. ಚಿಕಿತ್ಸೆ ಬಳಿಕೆ ಕೆಲ ಹೊತ್ತಿನಲ್ಲಿ ನಿಧಾನವಾಗಿ ಚೇತರಿಸಿಕೊಳ್ಳರು ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!