ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ವಿಮಾನಗಳ ಹಾರಾಟ ಸಮಯ ದಿನೇ ದಿನೇ ವಿಳಂಬವಾಗುತ್ತಿರುವುದಕ್ಕೆ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ, ಏರ್ ಇಂಡಿಯಾ ವಿಮಾನಗಳು ನಿರಂತರವಾಗಿ ವಿಳಂಬಗೊಳ್ಳುತ್ತಿದೆ. ನಾವು ದುಬಾರಿ ದರವನ್ನು ಪಾವತಿಸುತ್ತೇವೆ. ಆದರೆ, ವಿಮಾನಗಳು ಎಂದಿಗೂ ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಇದರಿಂದ ವೃತ್ತಿಪರರು, ಮಕ್ಕಳು ಮತ್ತು ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ.
ನಾಗರಿಕ ವಿಮಾನಯಾನ ಸಚಿವರು ಕೂಡಲೇ ಕ್ರಮ ಕೈಗೊಂಡು ಏರ್ ಇಂಡಿಯಾ ಸಂಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಸುಪ್ರಿಯಾ ಸುಳೆ ಪೋಸ್ಟ್ ಮಾಡಿದ್ದಾರೆ.
ಏರ್ ಇಂಡಿಯಾದಂತಹ ವಿಮಾನಯಾನ ಸಂಸ್ಥೆಗಳು ಪದೇ ಪದೇ ವಿಳಂಬ ಮಾಡಿದರೆ ಕಂಪನಿಯವರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಮತ್ತು ಪ್ರಯಾಣಿಕರಿಗೆ ಉತ್ತಮ ಸೇವಾ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಕಠಿಣ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸುಪ್ರಿಯಾ ಒತ್ತಾಯಿಸಿದ್ದಾರೆ.
Air India flights are endlessly delayed — this is unacceptable! We pay premium fares, yet flights are never on time. Professionals, children, and senior citizens — all affected by this constant mismanagement. Urging the Civil Aviation Minister to take action and hold Air India… pic.twitter.com/FmcJ8HR667
— Supriya Sule (@supriya_sule) March 21, 2025