ಏರ್‌ ಇಂಡಿಯಾ ವಿಮಾನ ಪತನ | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಹಮದಾಬಾದ್‌ನ ಮೇಘನಿ ನಗರದಲ್ಲಿ ಪತನವಾದ ಏರ್‌ ಇಂಡಿಯಾ ಬೋಯಿಂಗ್-787 ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಅನ್ನು ಡೇಟಾ ರಿಕವರಿಗಾಗಿ ಅಮೆರಿಕಕ್ಕೆ ಕಳುಹಿಸಲಾಗಿದೆ.

ವಿಮಾನದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್‌ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾದ ಹಿನ್ನೆಲೆ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಜೂನ್‌ 13ರಂದು ಬಿಜೆ ಮೆಡಿಕಲ್‌ ಹಾಸ್ಟೆಲಿನ ಮೇಲ್ಛಾವಣಿಯಲ್ಲಿದ್ದ ಏರ್‌ ಇಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಅನ್ನು‌ ವಿಮಾನ ಅಪಘಾತ ತನಿಖಾ ಬ್ಯೂರೋ ವಶಪಡಿಸಿಕೊಂಡಿತ್ತು. ಆದರೆ ಬ್ಲ್ಯಾಕ್‌‌ ಬಾಕ್ಸ್‌ಗೆ ಬೆಂಕಿ ಬಿದ್ದು ಹೊರಗಡೆಯಿಂದ ಹಾನಿಯಾಗಿದೆ. ಇದರಿಂದ ಸ್ಥಳೀಯ ತನಿಖಾಧಿಕಾರಿಗಳಿಂದ ಮಾಹಿತಿ ಹೊರ ತೆಗೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಡೇಟಾ ರಿಕವರಿಗಾಗಿ ಬ್ಲ್ಯಾಕ್‌ಬಾಕ್ಸ್‌ ಅನ್ನು ಅಮೆರಿಕಾಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!