ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ವಿಮಾನ ದುರಂತದಲ್ಲಿ ಸ್ಥಳೀಯರು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಪ್ರಯಾಣಿಕರು ಸೇರಿದಂತೆ ಒಟ್ಟು 265 ಜನರು ಸಾವಿಗೀಡಾಗಿದ್ದಾರೆ.
ಗುರುವಾರ ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ವಿಮಾನ ಅಪ್ಪಳಿಸಿತು.
ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದಾರೆ. ಇನ್ನೂ ಅವಘಡದಲ್ಲಿ ಗಾಯಗೊಂಡವರಿಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.