ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಂತ್ರಿಕ ದೋಷದಿಂದ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ಘಟನೆಯಲ್ಲಿ ಮೃತಪಟ್ಟವರ ಡಿಎನ್‌ಎ ಟೆಸ್ಟ್ ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ 80 ಜನರ ಡಿಎನ್‌ಎ ಮ್ಯಾಚ್ ಆಗಿದೆ. ಒಟ್ಟು 33 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಅಹಮದಾಬಾದ್ ಮೂಲದ 12 ಮಂದಿ, ಬರೋಡಾದ ಐದು ಮಂದಿ, ಮೆಹ್ಸಾನಾದಿಂದ ನಾಲ್ಕು ಮಂದಿ, ಆನಂದ್‌ನಿಂದ ನಾಲ್ಕು ಮಂದಿ, ಖೇಡಾ, ಭರೂಚ್‌ನಿಂದ ತಲಾ ಇಬ್ಬರು, ಉದಯಪುರ, ಜೋಧ್‌ಪುರ ಬೋಟಾಡ್‌ನಿಂದ ತಲಾ ಒಬ್ಬರ ಮೃತದೇಹ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ವಿಮಾನ ದುರಂತ ಸಂಭವಿಸಿದ ಮೂರು ದಿನಗಳ ನಂತರ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಪತ್ತೆಯಾಗಿದೆ. ಈ ಕುರಿತು ರಾಜ್ಯದ ಗೃಹ ಸಚಿವ ಹರ್ಷ್ ಸಾಂಘವಿ ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ 11:10ಕ್ಕೆ ಬಂದ ಡಿಎನ್‌ಎ ವರದಿಯಲ್ಲಿ ರೂಪಾನಿ ಅವರ ಡಿಎನ್‌ಎಗೆ ಮ್ಯಾಚ್ ಆಗಿದೆ ಎಂದು ತಿಳಿಸಿದ್ದಾರೆ.