ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತನಗೊಂಡ ಏರ್ ಇಂಡಿಯಾ ವಿಮಾನದ ಪೈಲಟ್ 8,200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತಿಳಿಸಿದೆ.
ಅಹಮದಾಬಾದ್‌ನಲ್ಲಿ ಲಂಡನ್‌ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದ ಪತನಗೊಂಡ ಬೆನ್ನಲ್ಲೇ ಡಿಜಿಸಿಎ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.39ಕ್ಕೆ ಟೇಕಾಫ್ ಆಗಿದೆ. ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಸುತ್ತಿದ್ದರು.