ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟೇಕಾಫ್ ನಂತರ ಎಂಜಿನ್‌ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿಯ ಮೆಡಿಕಲ್ ಕಾಲೇಜಿನ ಮೇಲೆ ಪತನಗೊಂಡಿದೆ.