Friday, July 1, 2022

Latest Posts

ಕಳೆದ 24 ಗಂಟೆಯಲ್ಲಿ ಕಾಬೂಲ್ ನಿಂದ 19 ಸಾವಿರ ಜನರ ಏರ್ ಲಿಫ್ಟ್: ಐತಿಹಾಸಿಕ ದಾಖಲೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿaತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಫಘಾನಿಸ್ತಾನವನ್ನು ತಾಲಿಬಾನ್ ಗಳು ವಶಪಡಿಸಿಕೊಳ್ಳುತ್ತಿದ್ದಂತೆಯೇ ಅಲ್ಲಿನ ನಾಗರಿಕರು ದೇಶ ಬಿಟ್ಟು ಹೊರಡಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಏರ್ ಲಿಫ್ಟ್ ನಡೆಯುತ್ತಿದೆ.

ಕಳೆದ 24 ಗಂಟೆಗಳಲ್ಲಿ 90 ವಿಮಾನಗಳಲ್ಲಿ 19,000 ಜನರನ್ನು ಕಾಬೂಲ್‌ನಿಂದ ಯುಎಸ್​ಗೆ ಏರ್ ಲಿಫ್ಟ್ ಮಾಡಲಾಗಿದ್ದು, ಈ ಮೂಲಕ ಇದುವರೆಗೂ ಒಟ್ಟು 82,000 ಜನರನ್ನು ಏರ್ ಲಿಫ್ಟ್ ಮಾಡಲಾಗಿದೆ.  ಇದು ವಿಶ್ವದ ಇತಿಹಾಸದಲ್ಲೇ ಅತಿದೊಡ್ಡ ಏರ್ ಲಿಫ್ಟ್ ಎಂದು ಹೇಳಲಾಗಿದೆ.

ಈ ತಿಂಗಳ ನಂತರವೂ ಅಫಘಾನಿಸ್ತಾನ ಬಿಟ್ಟುಹೋಗಲು ಅಮೆರಿಕ ಮತ್ತು ಮಿತ್ರ ಪಡೆಗಳು ಸೇರಿದಂತೆ ಇತರೆ ದೇಶಗಳ ನಾಗರಿಕರಿಗೆ ಅವಕಾಶ ನೀಡಲಾಗುವುದು ಎಂದು ತಾಲಿಬಾನ್ ಭರವಸೆ ನೀಡಿದೆ ಎಂದು ಅಮೆರಿಕದ ವಿದೇಶಾಂಗ ಸಚಿವ ಆಂಟನಿ ಬ್ಲಿಂಕೆನ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss