ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯ: ನಿರ್ಮಾಣ, ನೆಲಸಮ ಚಟುವಟಿಕೆಗಳಿಗೆ ಬ್ರೇಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯಲ್ಲಿ ವಾಯು ಮಾಲಿನ್ಯದ ಮಟ್ಟವು ಹೆಚ್ಚುತ್ತಿದ್ದು, ಹೀಗಾಗಿ ಕೇಂದ್ರದ ವಾಯು ಗುಣಮಟ್ಟ ಸಮಿತಿಯು ಶನಿವಾರ ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಅಧಿಕಾರಿಗಳಿಗೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್ ಹಂತ 3ರ ಅಡಿಯಲ್ಲಿ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿರ್ಬಂಧಗಳನ್ನು ಜಾರಿಗೆ ತರುವಂತೆ ನಿರ್ದೇಶಿಸಿದೆ.

ಆದರೆ ಈ ನಿರ್ಬಂಧ ರಾಷ್ಟ್ರೀಯ ಭದ್ರತೆ, ರಕ್ಷಣೆ, ರೈಲ್ವೆ ಮತ್ತು ಮೆಟ್ರೋ ರೈಲು ಸೇರಿದಂತೆ ಇತರ ಅಗತ್ಯ ಯೋಜನೆಗಳಿಗೆ ಅನ್ವಯವಾಗುವುದಿಲ್ಲ. ಅದೇ ರೀತಿ ಈ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳಿಗೆ ಅವಕಾಶವಿಲ್ಲ.

ವಾಯು ಗುಣಮಟ್ಟವನ್ನು ಹೆಚ್ಚುತ್ತಿರುವ ಹಿನ್ನೆಲೆ ಬಿಎಸ್ III ಪೆಟ್ರೋಲ್ ಮತ್ತು ಬಿಎಸ್ IV ಡೀಸೆಲ್ ನಾಲ್ಕು-ಚಕ್ರ ವಾಹನಗಳ ಚಲನೆಯ ಮೇಲೆ ನಿರ್ಬಂಧಗಳನ್ನು ವಿಧಿಸಬಹುದು ಎಂದು ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಆಯೋಗ (ಸಿಎಕ್ಯೂಎಂ) ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!