October 15, 2026
Thursday, October 15, 2026
spot_img

WEATHER | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮೋಡ ಕವಿದ ವಾತಾವರಣ, ಹಲವು ಜಿಲ್ಲೆಗಳಲ್ಲಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದ ಉತ್ತರ ಆಂಧ್ರಾ ಕರಾವಳಿಗೆ ಪ್ರವೇಶಿಸಿ ಉತ್ತರಾಭಿಮುಖವಾಗಿ ಚಲನೆ ಮಾಡುತ್ತಿದೆ. ಇದು ರಾಜ್ಯದ ಮೇಲೆಯೂ ಪರಿಣಾಮ ಬೀರಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರದ ಏರಿಳಿತಗಳು ಮುಂದುವರಿದಿವೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಎರಡೂ ಇರಲಿದೆ. ಕರ್ನಾಟಕ ಕೇರಳ ಗಡಿಯಲ್ಲಿ ಮಾತ್ರ ತುಂತುರು ಮಳೆ ಬೀಳುವ ಸಾಧ್ಯತೆ ಇದೆ. ಇಂದು ಹಾಗೂ ನಾಳೆ ರಾಜ್ಯದಲ್ಲಿ ಮಳೆ ಬೀಳಲಿದೆ ಅದಾದ ನಂತರ ಇಡೀ ಸೆಪ್ಟೆಂಬರ್‌ನಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಸಕಲೇಶಪುರದಲ್ಲಿ ಮಳೆ, ಮಳೆ ಮೋಡ ಹಾಗೂ ಬಿಸಿಲಿನ ವಾತಾವರಣ ಇರಲಿದೆ. ಇನ್ನು ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೀದರ್‌ನಲ್ಲಿ ಮಧ್ಯಾಹ್ನದ ಮೇಲೆ ಗುಡುಗು ಸಹಿತ ಮಳೆಯಾಗಲಿದೆ.

ಆದರೆ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕೇವಲ ಮೋಡ ಕವಿದ ವಾತಾವರಣವಿರಲಿದ್ದು, ಸೆಪ್ಟೆಂಬರ್ 24ರಿಂದ ಒಟ್ಟಾರೆ ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ.

Must Read