ಮಳೆಯಿಂದಾಗಿ ದೆಹಲಿಯಲ್ಲಿ ಸುಧಾರಿಸಿದ ಗಾಳಿಯ ಗುಣಮಟ್ಟ: ಸದ್ಯಕ್ಕಿಲ್ಲ ಸಮ-ಬೆಸ ಯೋಜನೆ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಗುರುವಾರ ರಾತ್ರಿ ಸುರಿದ‌ ಮಳೆಯಿಂದಾಗಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ (Air Quality) ಪ್ರಮಾಣ ಸುಧಾರಿಸಿದ್ದು, ಸದ್ಯಕ್ಕೆ ಸಮ-ಬೆಸ (Odd-Even) ಯೋಜನೆ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರೈ (Gopal Rai) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು ನವೆಂಬರ್ 13 ರಿಂದ ಸಮ ಬೆಸ ಜಾರಿಗೆ ತರಲು ನಿರ್ಧರಿಸಲಾಗಿತ್ತು, ಮಳೆಯಿಂದ ಈ ಪ್ರಸ್ತಾಪ ಕೈಬಿಟ್ಟಿದೆ. ದೀಪಾವಳಿಯ (Deepavali) ನಂತರ ಗಾಳಿಯ ಗುಣಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತದೆ. ಗಾಳಿಯ ಗುಣಮಟ್ಟ ಮತ್ತೆ ಹದಗೆಟ್ಟರೆ ಬೆಸ-ಸಮ ಯೋಜನೆಗೆ ಜಾರಿಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದರು.

ಇದಕ್ಕೂ ಮುನ್ನ ಸೋಮವಾರ, ಸಚಿವರು ಬೆಸ-ಸಮ ಯೋಜನೆಯನ್ನು ನವೆಂಬರ್ 13 ಮತ್ತು ನವೆಂಬರ್ 20ರ ನಡುವೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!