ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಫೆಬ್ರವರಿ1 ರಿಂದ 17ರವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಈ ಹಿನ್ನಲೆಯಲ್ಲಿ ಯಲಹಂಕ ಸುತ್ತಾಮುತ್ತಲಿನ ಪ್ರದೇಶದಲ್ಲಿ ಮಾಂಸ ಮಾರಾಟವನ್ನು ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ.
ಈ ಸಂಬಂಧ ಬಿಬಿಎಂಪಿಯ ಯಲಹಂಕದ ಜಂಟಿ ವಲಯ ಆಯುಕ್ತ ಮೊಹದ್ ನಯೀಮ್ ಮೊಯಿನ್ ಅವರು ಆದೇಶ ಹೊರಡಿಸಿದ್ದಾರೆ. ಜನವರಿ 23ರಿಂದ ಫೆಬ್ರವರಿ.17ರವರೆಗೆ ಯಲಹಂಕದ ವಾಯುನೆಲೆಯಿಂದ 13 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟವನ್ನು ಮಾಡದಂತೆ ಸೂಚಿಸಿದ್ದಾರೆ.
ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವಂತೆಯೂ ಸೂಚಿಸಿರುವಂತ ಅವರು, ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಹಾರ ತಯಾರಿಕೆ, ಮಾರಾಟವನ್ನು ನಿಷೇಧಿಸಿದ್ದಾರೆ. ಒಂದು ವೇಳೆ ಈ ನಿಯಮ ಮೀರಿದ್ರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.