ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ, ಇನ್ನೆರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕರಾವಳಿಯ ಹಲವು ಕಡೆಗಳಲ್ಲಿ ಹಾಗು ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ , ಕೊಡಗು ಜಿಲ್ಲೆಯ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನ ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ಕರಾವಳಿಯ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!