ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಕಾಸರಗೋಡು:
ಅರಬ್ಬೀ ಸಮುದ್ರದಲ್ಲಿ ಮೇ 14ರಂದು ವಾಯುಭಾರ ಕುಸಿತ ತಲೆದೋರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆ ಸಹಿತ ಕೇರಳದ ವಿವಿಧೆಡೆ ಬಿರುಸಿನ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ.
ಈ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಮೇ 15 ರಂದು ಯಲ್ಲೋ ಅಲರ್ಟ್ ಹಾಗೂ ಮೇ 16 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಜಿಲ್ಲೆಯ ವಿವಿಧೆಡೆ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗರಿಷ್ಠ ಜಾಗ್ರತೆ ಪಾಲಿಸುವಂತೆ ತಿಳಿಸಲಾಗಿದೆ.
ಜಿಲ್ಲೆಯ ಮೀನುಗಾರರಿಗೆ ಎಚ್ಚರಿಕೆ
ಬಿರುಸಿನ ಗಾಳಿ ಮತ್ತು ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಮೀನುಗಾರರು ಮೇ 13 ರಿಂದ 16ರ ವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಕೂಡದು ಎಂದು ಕೇಂದ್ರ ಹವಾಮಾನ ಇಲಾಖೆಯು ತಿಳಿಸಿದೆ. ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರರು ಮೇ 13 ರಂದು ರಾತ್ರಿಗೆ ಮುಂಚಿತವಾಗಿ ದಡ ಸೇರಬೇಕು ಎಂದು ಸೂಚನೆ ನೀಡಲಾಗಿದೆ.