ಮಧ್ಯಪ್ರದೇಶದ ರೇವಾದಲ್ಲಿ ದೇವಸ್ಥಾನಕ್ಕೆ ವಿಮಾನ ಡಿಕ್ಕಿ: ಪೈಲಟ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶುಕ್ರವಾರ ಮುಂಜಾನೆ ಮಧ್ಯಪ್ರದೇಶದ ರೇವಾದಲ್ಲಿರುವ ದೇವಸ್ಥಾನಕ್ಕೆ ಹಾರಾಟ ನಡೆಸುತ್ತಿದ್ದ ತರಬೇತಿ ವಿಮಾನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ  ಪೈಲಟ್ ಸಾವನ್ನಪ್ಪಿದ್ದು, ಮತ್ತೊಬ್ಬ ಪೈಲಟ್‌ ಗಾಯಗೊಂಡಿರುವುದಾಗಿ ರೇವಾ ಎಸ್ಪಿ ನವನೀತ್ ಭಾಸಿನ್ ತಿಳಿಸಿದ್ದಾರೆ.

ರೇವಾ ಜಿಲ್ಲೆಯ ಡುಮ್ರಿ ಗ್ರಾಮದ ದೇವಸ್ಥಾನದ ಗುಮ್ಮಟಕ್ಕೆ ಡಿಕ್ಕಿ ಹೊಡೆದು ವಿಮಾನ ಪತನಗೊಂಡಿದೆ. ಗಾಯಗೊಂಡ ಪೈಲಟ್ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಭಾಸಿನ್ ತಿಳಿಸಿದರು.

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ತಂಡ ಆಗಮಿಸಿದೆ. ಮೇಲ್ನೋಟಕ್ಕೆ, ಹವಾಮಾನ ವೈಪರೀತ್ಯ ಮತ್ತು ಮಂಜು ಮುಸುಕಿದ ವಾತಾವರಣವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!