ಹೊಸದಿಗಂತ ವರದಿ ಕಲಬುರಗಿ:
ಗಾಂಜಾ ಬೆಳೆಯುವವರ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ಕಮಲಾಪೂರ ಸಿ.ಪಿ.ಐ ಶ್ರೀಮಂತ ಇಲ್ಲಾಳ ಅವರನ್ನು ಸೋಮವಾರ ಬೆಳಿಗ್ಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಏರ್ ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ, ಎಸ್.ಪಿ. ಇಶಾ ಪಂತ್ ಇದ್ದರು.