ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪೂರ್ವ ಡೆಮಾಕ್ರೆಟಿಕ್ ರಿಪಬ್ಲಿಕ್ ಅಫ್ ಕಾಂಗೋ ದಕ್ಷಿಣ ಪ್ರಾಂತ್ಯದ ಕವುಮು ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.
ಕಾಂಗೋ ಸ್ಥಳೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಕವುಮು ವಿಮಾನ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಕವುಮು ವಿಮಾನ ನಿಲ್ದಾಣದಿಂದ ಶಬುಂಡಾಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವಿಮಾನ ಅಪಘಾತದಲ್ಲಿ ಮೃತಪಟ್ಟ ಮೂವರಲ್ಲಿ ಇಬ್ಬರು ಸಿಬ್ಬಂದಿ ಮತ್ತು ಓರ್ವ ಪ್ರಯಾಣಿಕ ಎಂದು ರೇಡಿಯೋ ಒಕಾಪಿ ತಿಳಿಸಿದೆ.