Thursday, February 29, 2024

ವಿಮಾನದ ಟಾಯ್ಲೆಟ್ ಡೋರ್ ಲಾಕ್: ಮುಂಬೈನಿಂದ ಬೆಂಗಳೂರಿಗೆ ಅಲ್ಲೇ ಕೂತು ಪ್ರಯಾಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಾಯ್ಲೆಟ್‌ ಬಾಗಿಲು ಲಾಕ್‌ ಆಗಿ ತೆರೆಯಲು ಸಾಧ್ಯವಾಗದ ಕಾರಣ ಪ್ರಯಾಣಿಕನೋರ್ವ ವಿಮಾನದ ಟಾಯ್ಲೆಟ್‌ನಲ್ಲೇ ಕುಳಿತು ಮುಂಬೈನಿಂದ ಬೆಂಗಳೂರಿಗೆ (Mumbai-Bengaluru Flight) ಪ್ರಯಾಣಿಸಿದ ಘಟನೆ ನಡೆದಿದೆ .

ಸ್ಪೈಸ್ಜೆಟ್ ವಿಮಾನದಲ್ಲಿ ಟಾಯ್ಲೆಟ್ ಬಾಗಿಲು ಅಸಮರ್ಪಕವಾಗಿದ್ದರಿಂದ ಪ್ರಯಾಣಿಕರೊಬ್ಬರು ಒಳಗೆ ಸಿಲುಕಿ ಪ್ರಯಾಣಿಸಿದ್ದ ಘಟನೆ ನಡೆದಿತ್ತು. ಇದೀಗ ಆ ಪ್ರಯಾಣಿಕನಿಗೆ ಸಂಪೂರ್ಣ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದು ಸ್ಪೈಸ್ ಜೆಟ್ ವಕ್ತಾರರು ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಮಾನಯಾನ ಸಂಸ್ಥೆ ಕ್ಷಮೆಯಾಚಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಇಂಜಿನಿಯರ್ ಶೌಚಾಲಯದ ಬಾಗಿಲು ತೆರೆದ ನಂತರ ಪ್ರಯಾಣಿಕರು ಹೊರಗೆ ಬಂದಿದ್ದರು.
ಜನವರಿ 16ರಂದು ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಸ್ಪೈಸ್ಜೆಟ್ ವಿಮಾನದ ಬಾಗಿಲಿನ ಲಾಕ್ ದೋಷದಿಂದಾಗಿ ಪ್ರಯಾಣಿಕರೊಬ್ಬರು ಸುಮಾರು ಒಂದು ಗಂಟೆಗಳ ಕಾಲ ಶೌಚಾಲಯದಲ್ಲಿ ಸಿಲುಕಿಕೊಂಡರು. ಈ ಸಮಯದಲ್ಲಿ ವಿಮಾನವು ಮುಂಬೈಯಿಂದ ಬೆಂಗಳೂರಿಗೆ ಸಂಚರಿಸುತ್ತಿತ್ತು ಎಂದು ವಕ್ತಾರರು ತಿಳಿಸಿದ್ದಾರೆ.

‘ಪ್ರಯಾಣದ ಸಮಯದಲ್ಲಿ ನಮ್ಮ ಸಿಬ್ಬಂದಿ ಪ್ರಯಾಣಿಕರಿಗೆ ಸಹಾಯ ಮಾಡುವುದರಲ್ಲಿ ನಿರತರಾಗಿದ್ದರು.

ವಿಮಾನ ಲ್ಯಾಂಡಿಂಗ್ ಆದ ನಂತರ, ಎಂಜಿನಿಯರ್ ಶೌಚಾಲಯದ ಬಾಗಿಲು ತೆರೆದರು. ತಕ್ಷಣ ಪ್ರಯಾಣಿಕರಿಗೆ ವೈದ್ಯಕೀಯ ಸಹಾಯವನ್ನು ಒದಗಿಸಲಾಯಿತು. ಪ್ರಯಾಣಿಕರಿಗೆ ಅವರ ಟಿಕೆಟ್ಗಾಗಿ ಸಂಪೂರ್ಣ ಹಣವನ್ನು ಹಿಂತಿರುಗಿಸಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಮತ್ತೊಂದೆಡೆ, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!