ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿರಿಯಾದ ದಾರಾದಲ್ಲಿನ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಎಂಟು ಮಂದಿ ಸಿರಿಯಾ ಸೈನಿಕರು ಮೃತಪಟ್ಟಿದ್ದಾರೆ.
ಮಂಗಳವಾರ ತಡರಾತ್ರಿ ಇಸ್ರೇಲ್‌ನ ಖಾಲಿ ಪ್ರದೇಶಗಳಲ್ಲಿ ಸಿರಿಯಾದಿಂದ ರಾಕೆಟ್ ದಾಳಿ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ದಾಳಿ ಮಾಡಿದ್ದು, ಎಂಟು ಸೈನಿಕರು ಪ್ರಾಣತೆತ್ತಿದ್ದಾರೆ.
ಈ ಪ್ರದೇಶದಲ್ಲಿ ಉದ್ವಿಗ್ನತೆ ಮುಂದುವರಿದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.