ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಶ್ವರ್ಯ ಗೌಡ ವಂಚನೆ ಪ್ರಕರಣದ ರಹಸ್ಯಗಳು ಬಗೆದಷ್ಟು ಬಯಲಾಗುತ್ತಿವೆ. ಈಕೆಗೆ ಸೇರಿದ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದರು. ಆ ಕಾರನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಬಳಸುತ್ತಿದ್ದರು. ಇದೀಗ ವಿನಯ್ ಕುಲಕರ್ಣಿ ಕಾರು ಚಾಲಕನನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಹಲವು ಮಾಹಿತಿ ಹೊರಬಿದ್ದಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಾರು ಚಾಲಕ ವೀರೇಶ್ ದಳವಾಯಿ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದು, ಐಶ್ವರ್ಯ ಗೌಡ ಹಾಗೂ ವಿನಯ್ ಕುಲಕರ್ಣಿ ಪರಿಚಯಸ್ಥರು ಎಂದು ತಿಳಿಸಿದ್ದಾನೆ.
ಐಶ್ವರ್ಯ ಗೌಡ ಈ ಹಿಂದೆ ಮಹಾರಾಷ್ಟ್ರಕ್ಕೆ ಹೋಗಿದ್ದರು. ಈ ವೇಳೆ ರಾತ್ರಿ ವಿನಯ್ ಕುಲಕರ್ಣಿ ನಿವಾಸಕ್ಕೆ ಆಡಿ ಕಾರಿನಲ್ಲಿ ಬಂದಿದ್ದು, ನಂತರ ವಾಪಸ್ಸು ಹೋಗುವಾಗ ಕಾರು ಬಿಟ್ಟು ವಿಮಾನದಲ್ಲಿ ಬೆಂಗಳೂರಿಗೆ ಹೋಗಿದ್ದರು ಎಂದು ತಿಳಿದು ಬಂದಿದೆ.
ಇದೀಗ ಪ್ರಕರಣದ ಕೊನೆ ಹಂತದ ತನಿಖೆ ನಡೆಸುತ್ತಿರುವ ಪೊಲೀಸರು, ಶೀಘ್ರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದು, ಬೇರೆ ಯಾರು ಈ ವಂಚನೆ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬುದು ಹೊರಗೆ ಬರಲಿದೆ.