ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಹೇಳಿಕೊಂಡು ಐಶ್ವರ್ಯಾ ಗೌಡ ವಂಚನೆ ಮಾಡಿರುವ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಪ್ರಕರಣ ಸಂಬಂಧ ಡಿಕೆ ಸುರೇಶ್‌ಗೂ ED ನೋಟಿಸ್ ಜಾರಿ ಮಾಡಿತ್ತು. ಅದರಂತೆ ಕೆಲ ಸಮಯ ಕಾಲಾವಕಾಶ ಕೇಳಿದ್ದ ಸುರೇಶ್, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ಆಗಮಿಸುವ ಮುನ್ನ ಮಾತನಾಡಿದ ಡಿಕೆ ಸುರೇಶ್, ವಂಚನೆ ಕೇಸ್‌ಗೂ ನನಗೂ ಸಂಬಂಧವಿಲ್ಲ ಎಂದಿದ್ದಾರೆ. ತನಿಖೆಗೆ ಸಹಕಾರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಶಾಂತಿನಗರ ಇಡಿ ಕಚೇರಿಯಲ್ಲಿ ಡಿ.ಕೆ ಸುರೇಶ್ ವಿಚಾರಣೆ ನಡೆದಿದೆ. 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.