ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಲಿ ಕಣ್ಣಿನ ಚೆಲುವೆ ಐಶ್ವರ್ಯಾ ರೈ ಬಚ್ಚನ್ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಮಗಳು ಆರಾಧ್ಯ ಜೊತೆಯಲ್ಲಿ ಫ್ರೆಂಚ್ ರಿವೇರಾದತ್ತ ಬುಧವಾರ ರಾತ್ರಿ ಪ್ರಯಾಣ ಬೆಳೆಸಿದ್ದಾರೆ. ರಿವೇರಾದ ಕ್ಯಾನೇಸ್ ಫಿಲಂ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಬಚ್ಚನ್ ಭಾಗಿಯಾಗಲಿದ್ದಾರೆ.
ಇನ್ನು ಬುಧವಾರ ರಾತ್ರಿ ಮುಂಬೈ ಏರ್‌ಪೋರ್ಟ್‌ಗೆ ಆಗಮಿಸುತ್ತಿದ್ದಂತೆ ಪಾಪರಾಜಿಗಳು ಫೋಟೋ ಕ್ಲಿಕ್ ಮಾಡಲು ಶುರು ಮಾಡಿದರು. ಆದ್ರೆ ಐಶ್ವರ್ಯ ಕೈಗೆ ಬ್ಯಾಂಡೇಜ್ ಹಾಕಿಕೊಂಡು ಬರುತ್ತಿರೋದನ್ನು ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ.
ಐಶ್ವರ್ಯ ಅವರ ಏರ್‌ಪೋರ್ಟ್ ಲುಕ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಐಶ್ವರ್ಯಾಗೆ ಏನಾಯ್ತು ಎಂದು ಅಭಿಮಾನಿಗಅಳು ಕೇಳುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.